Home ಸುದ್ದಿಗಳು ಕುಮಾರಧಾರ ಸ್ನಾನಘಟ್ಟದ ಬಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

ಕುಮಾರಧಾರ ಸ್ನಾನಘಟ್ಟದ ಬಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

0
ಕುಮಾರಧಾರ ಸ್ನಾನಘಟ್ಟದ ಬಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದ ಬಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರನ್ನು ರಕ್ಷಿಸಲಾದ ಘಟನೆ ನಡೆದಿದೆ.

ಬೆಂಗಳೂರಿನಿಂದ ಒಂಟಿಯಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೃದ್ಧರೋರ್ವರು ಸ್ನಾನಘಟ್ಟದ ಬಳಿ ನೀರಿಗಿಳಿದ ವೇಳೆ ಸೆಳೆತಕ್ಕೆ ಕೊಚ್ಚಿಕೊಂಡು ಹೋಗುತ್ತಿರುವುದನ್ನು ಸ್ಥಳದಲ್ಲಿದ್ದವರು ಗಮನಿಸಿ ದೇವಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ದೇವಳದ ಸಿಬ್ಬಂದಿ ಲೋಕಾನಾಥ್‌ ಅವರಿಗೆ ಮಾಹಿತಿ ನೀಡಿದ್ದರು. ತತ್‌ಕ್ಷಣ ಅಲ್ಲಿಗೆ ಆಗಮಿಸಿದ ಲೋಕನಾಥ್‌ ಅವರು ಅಲ್ಲಿ ಸ್ಥಳೀಯರ ಸಹಕಾರದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವೃದ್ಧರನ್ನು ನೀರಿನಿಂದ ಹೊರಕ್ಕೆ ಕರೆತಂದು, ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿದ್ದಾರೆ.

ವೃದ್ಧರು ಮನೆಯವರ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಲಾಯಿತು.

 

LEAVE A REPLY

Please enter your comment!
Please enter your name here