Home ಸುದ್ದಿಗಳು ಉಳ್ಳಾಲ: ರೈಲು ಹಳಿಯ ಮೇಲೆ ಜಲ್ಲಿಕಲ್ಲು ಇಟ್ಟ ಕಿಡಿಗೇಡಿಗಳು

ಉಳ್ಳಾಲ: ರೈಲು ಹಳಿಯ ಮೇಲೆ ಜಲ್ಲಿಕಲ್ಲು ಇಟ್ಟ ಕಿಡಿಗೇಡಿಗಳು

0
ಉಳ್ಳಾಲ: ರೈಲು ಹಳಿಯ ಮೇಲೆ ಜಲ್ಲಿಕಲ್ಲು ಇಟ್ಟ ಕಿಡಿಗೇಡಿಗಳು

ಉಳ್ಳಾಲ: ತೊಕ್ಕೊಟ್ಟಿನ ಗಣೇಶ್‌ ನಗರ ಬಳಿಯ ರೈಲು ಹಳಿಯಲ್ಲಿ ಕಿಡಿಗೇಡಿಗಳು ಜಲ್ಲಿಕಲ್ಲು ಇಟ್ಟ ಘಟನೆ ನಿನ್ನೆ ನಡೆದಿದೆ.

ಗಣೇಶ್‌ ನಗರ ಮತ್ತು ಕಾಪಿಕಾಡು ನಡುವಿನ ಹಳಿಯಲ್ಲಿ ಈ ಘಟನೆ ನಡೆದಿದ್ದು ರೈಲು ಸಂಚರಿಸಿದಾಗ ಆದ ಶಬ್ದಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಮಂಗಳೂರಿನಿಂದ ಕೇರಳ ಕಡೆಗೆ ರೈಲು ಸಾಗಿದಾಗ ಸಣ್ಣ ಸದ್ದು ಕೇಳಿಸಿದ್ದು, ಕೇರಳದಿಂದ ಮಂಗಳೂರು ಕಡೆಗೆ ಸಂಚರಿಸಿದ ಸಂದರ್ಭದಲ್ಲಿ ಉಂಟಾದ ದೊಡ್ಡ ಸದ್ದಿನಿಂದ ಸ್ಥಳೀಯ ಮನೆಗಳಲ್ಲಿ ಕಂಪನ ಉಂಟಾಗಿದೆ. ಜನ ಬೆಚ್ಚಿ ಬಿದ್ದು ಟಾರ್ಚ್‌ಲೈಟ್‌ ಹಿಡಿದು ಹಳಿ ಸಮೀಪ ಬಂದು ನೋಡಿದಾಗ ಜಲ್ಲಿ ಕಲ್ಲು ಹುಡಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಾತ್ರಿ 8 ಗಂಟೆ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ಮರಳುತ್ತಿದ್ದ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅವರದೇ ಕೃತ್ಯ ಇದಾಗಿರಬೇಕು ಎಂದು ಶಂಕಿಸಲಾಗಿದೆ.

ರೈಲ್ವೇ ಸಲಹಾ ಸಮಿತಿ ಸದಸ್ಯರ ದೂರಿನಂತೆ ಉಳ್ಳಾಲ ಪೊಲೀಸರು ಮತ್ತು ರೈಲ್ವೇ ಸಿಬಂದಿ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದಾರೆ.

 

LEAVE A REPLY

Please enter your comment!
Please enter your name here