Home ಸುದ್ದಿಗಳು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ನಿರ್ಧಾರ

ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ನಿರ್ಧಾರ

0
ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ನಿರ್ಧಾರ

ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಅವರ ಬ್ರಿಟಿಷರ ವಿರುದ್ಧದ ಸಂಗ್ರಾಮಕ್ಕೆ 200 ವರ್ಷ ತುಂಬಿದ ಹಿನ್ನೆಲೆ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.

ವಿಜಯದ ಜ್ಞಾಪಕಾರ್ಥವಾಗಿ ಅ.23ರಂದು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಇದೇ ಅಕ್ಟೋಬರ್ 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ ಸಂದಲಿವೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು, ರಾಜ್ಯಸಭಾ ಸಂಸದರಾದ ಈರಣ್ಣ ಕರಡಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಅರವಿಂದ ಬೆಲ್ಲದ್​, ಅಭಯ್ ಪಾಟೀಲ್​ ಮತ್ತು ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಪ್ರಮುಖರೊಂದಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಮನವಿ ಮಾಡಲಾಗಿತ್ತು.

 

LEAVE A REPLY

Please enter your comment!
Please enter your name here