Home ಸುದ್ದಿಗಳು ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕಿದೆ: ಮಂಜುನಾಥ್ ಭಂಡಾರಿ

ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕಿದೆ: ಮಂಜುನಾಥ್ ಭಂಡಾರಿ

0
ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕಿದೆ: ಮಂಜುನಾಥ್ ಭಂಡಾರಿ

ಮಂಗಳೂರು: ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನ ಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್‌ಸಿ ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಿದ್ದರೂ ಅವರು ಜಾಮೀನು ಪಡೆದು ಹೊರಗೆ ಬರುತ್ತಾರೆ. ಮತ್ತೆ ಅದೇ ಡ್ರಗ್ಸ್ ದಂಧೆ ಮಾಡುತ್ತಿರುವುದು ಕಂಡು ಬಂದಿದೆ.

ಡ್ರಗ್ಸ್ ದಂಧೆಗೆ ಬಹಳ ಸಣ್ಣ ಕೇಸ್‌ಗಳು ಇರುವುದರಿಂದ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಪೊಲೀಸರು ಅಳಲು ತೋಡಿಕೊಂಡಿದ್ದು, ಈ ಬಗ್ಗೆ ಕಠಿಣ ಕ್ರಮ ಜಾರಿಯಾಗಬೇಕಾದರೆ ಕಾನೂನಿನಲ್ಲಿ ತಿದ್ದುಪಡಿ ಮಾಡಬೇಕಾಗಿದೆ ಎಂದು ಹೇಳಿದರು.

ಅವಿಭಜಿತ ದ.ಕ.ಜಿಲ್ಲೆಯಲ್ಲಿನ ಡ್ರಗ್ಸ್ ದಂಧೆಗೆ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ, ಗೃಹಮಂತ್ರಿ, ಐಜಿ, ಪೊಲೀಸ್ ಕಮಿಷನರ್‌ಗೆ ಪತ್ರ ಬರೆದಿದ್ದೆ. ಡ್ರಗ್ಸ್ ದಂಧೆಯ ಕರಾಳತೆಯ ಬಗ್ಗೆ ವಿವರಿಸಿದ್ದೇನೆ. ಡ್ರಗ್ಸ್ ದಂಧೆಯನ್ನು ಡಿಜಿಯವರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದರು.

 

LEAVE A REPLY

Please enter your comment!
Please enter your name here