
ಬಂಟ್ವಾಳ: ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವಾಗ ಗ್ರೈಂಡಿಂಗ್ ಯಂತ್ರವೊಂದು ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಮೆಲ್ಕಾರಿನ ಬೋಳಂಗಡಿಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಬೋಳಂಗಡಿ ನಿವಾಸಿ ಪದ್ಮನಾಭ ಶೆಣೈ ಎಂದು ಗುರುತಿಸಲಾಗಿದೆ. ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿರುವ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಎನ್.ಆರ್. ಕನ್‌ಸ್ಟ್ರಕ್ಷನ್ಸ್ ಕಂಪೆನಿಗೆ ಸೇರಿದ ಗ್ರೈಂಡಿಂಗ್ ಯಂತ್ರ ಬೋಳಂಗಡಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದು, ಅದೇ ಸ್ಥಳದಲ್ಲಿ ಪದ್ಮನಾಭ ನಡೆದುಕೊಂಡು ಹೋಗುತ್ತಿದ್ದರು. ಚಾಲಕ ರಾಜಕುಮಾರ ಯಾದವ್ ಯಂತ್ರವನ್ನು ಏಕಾಏಕಿ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಪದ್ಮನಾಭರಿಗೆ ಢಿಕ್ಕಿ ಹೊಡೆದಿದೆ.
ಘಟನೆ ಕುರಿತು ಗಾಯಾಳಿನ ಸಂಬಂಧಿ ಗುರುಪ್ರಸಾದ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
