Home ಸುದ್ದಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್‌

ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್‌

0
ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು.

ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿ ಜೊತೆಯಾಗಿ ಸಿಎಂ ನಿವಾಸಕ್ಕೆ ಆಗಮಿಸಿದ್ದರು.

ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಸಹ ಕಸರತ್ತು ನಡೆಸಿತ್ತು. ಈ ಹಿಂದೆ ಜೆಡಿಎಸ್‌ನಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನನ್ನನ್ನು ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ಮತ್ತೆ ನಾನು ಬೇರೆ ಪಕ್ಷದ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.

 

LEAVE A REPLY

Please enter your comment!
Please enter your name here