
ಉಳ್ಳಾಲ: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಅಪಘಾತ ನಡೆದ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಬಳಿ ನಡೆದಿದೆ.
ಈ ಘಟನೆಯಲ್ಲಿ ದೇರಳಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ, ಬಡಕಬೈಲು ಮಹಮ್ಮದ್ ಬಿ. ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (9) ಮೃತಪಟ್ಟ ವಿದ್ಯಾರ್ಥಿನಿ.
ಚಾಲಕ ಸಹಿತ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದಕ ಭಾಗದಿಂದ ದೇರಳಕಟ್ಟೆ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.
ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.
