
ಉಡುಪಿ: ಕಾಪುಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ವತಿಯಿಂದ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮವು ನಾಳೆ (ಅ.29) ಮಂಗಳವಾರ ಪೂರ್ವಾಹ್ನ 8:30 ರಿಂದ ಆರಂಭಗೊಳ್ಳಲಿದೆ.
ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪದ ಜೊತೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಬಂಟ್ವಾಳ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ಹಾಗೂ ನವದುರ್ಗಾ ಲೇಖನ ಬರೆಯುವ ಮೂಲಕ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರು ಹಾಗೂ ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಅಧ್ಯಕ್ಷರಾದ ರವಿ ಸುಂದರ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಹೆಗ್ಡೆ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ರಾಮಯ್ಯ, ಲೇಖಕರು ಮತ್ತು ಅಧ್ಯಾತ್ಮಿಕ ಚಿಂತಕರಾದ ಡಾ. ವೀಣಾ ಬನ್ನಂಜೆ, ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನ ಕೋಟ ಇದರ ಆಡಳಿತ ಮೊತ್ತೇಸರಾದ ಆನಂದ್ ಸಿ. ಕುಂದರ್, ಪಡುಬಿದ್ರಿ ಪಂಚಕಾಡು ಕೊರಗ ಕುಟುಂಬದ ಗುರಿಕಾರರು ಬಾಲರಾಜ್ ಕೊಡಿಕಲ್, ಸ್ವಸ್ತಿಕ ನ್ಯಾಷನಲ್ ಬ್ಯಾಸಿಗೇನ್ ಸ್ಕೂಲ್ ನ ಶಿಕ್ಷಣ ತಜ್ಞರು, ಪ್ರಾಂಶುಪಾಲರಾದ ಡಾ. ಮಾಲಿನಿ ಹೆಬ್ಬಾರ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಹುಬ್ಬಳ್ಳಿ ಜಿಲ್ಲಾ ಸಮಿತಿಯ ಪ್ರಧಾನ ಸಂಚಾಲಕರಾದ ಮಹೇಶ್ ಶೆಟ್ಟಿ ( ಹುಬ್ಬಳ್ಳಿ ಧಾರವಾಡ ಗದಗ ಹಾವೇರಿ ), ದಾವಣಗೆರೆ ಚಿತ್ರದುರ್ಗ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕರಾದ ದಿನೇಶ್ ಶೆಟ್ಟಿ, ಶಿವಮೊಗ್ಗ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕರಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕರಾದ ಚಂದ್ರಹಾಸ್ ಡಿ. ಶೆಟ್ಟಿ (ರಂಗೋಲಿ), ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
