
ಕುಂದಾಪುರ: ನ. 16 ರಂದು ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಘಟನೆಯಲ್ಲಿ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್ (22) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬೈಕನ್ನು ಪೊಲೀಸರು ವಶಪಡಿಸಿದ್ದಾರೆ.
ಘಟನೆ ಏನು: ಕೋಣಿಯ ಬ್ಯಾಂಕಿನ ಎಟಿಎಂಗೆ ನುಗ್ಗಿ ಯಂತ್ರ ತೆರೆಯಲು ಯತ್ನಿಸುತ್ತಿರುವಾಗ ಹೈದರಾಬಾದ್‌ನ ಸೆಕ್ಯೂರಿಟಿ ಸಂಸ್ಥೆಯವರು ಎಚ್ಚರಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದು, ಅಷ್ಟರಲ್ಲಿ ಕಳ್ಳರು ಬರಿಗೈಯಲ್ಲಿ ಓಡಿಹೋಗಿದ್ದರು.
ಈ ಆರೋಪಿತರು ಕುಂದಾಪುರ ಠಾಣೆ ಮಾತ್ರವಲ್ಲದೆ, ಇದಕ್ಕೂ ಹಿಂದೆ ಬೆಳ್ತಂಗಡಿ ಠಾಣೆ, ಪಡುಬಿದ್ರಿ ಠಾಣೆ, ಬಳ್ಳಾರಿ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್ ಕಳ್ಳತನ, ಬೈಕ್ ಕಳ್ಳತನ, ಅಂಗಡಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.
