Home ಸುದ್ದಿಗಳು ಉತ್ಸವದ ವೇಳೆ ಪಟಾಕಿ ದುರಂತ: 150ಕ್ಕೂ ಹೆಚ್ಚು ಮಂದಿಗೆ ಗಾಯ

ಉತ್ಸವದ ವೇಳೆ ಪಟಾಕಿ ದುರಂತ: 150ಕ್ಕೂ ಹೆಚ್ಚು ಮಂದಿಗೆ ಗಾಯ

0
ಉತ್ಸವದ ವೇಳೆ ಪಟಾಕಿ ದುರಂತ: 150ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಸರಗೋಡು: ಉತ್ಸವದ ವೇಳೆ ಪಟಾಕಿ ದುರಂತ ಸಂಭವಿಸಿದ ಘಟನೆ ನೀಲೇಶ್ವರಂ ಬಳಿಯ ವೀರರ್ಕಾವು ದೇವಸ್ಥಾನದಲ್ಲಿ ನಡೆದಿದೆ.

ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಈ ಘಟನೆಯಲ್ಲಿ 150 ಮಂದಿ ಗಾಯಗೊಂಡಿದ್ದು 8 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ದೇವಾಲಯದ ಗೋಡೆಗೆ ಹೊಂದಿಕೊಂಡಂತೆ ನಿರ್ಮಿಸಲಾದ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಪಟಾಕಿ ಸಿಡಿದ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಕಟ್ಟಡದ ಮೇಲೆ ಬಿದ್ದಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ತೆಯ್ಯಂ ಪ್ರದರ್ಶನವನ್ನು ವೀಕ್ಷಿಸಲು ಬಂದಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ.

ದೇವಸ್ಥಾನದ ಅಧಿಕಾರಿಗಳು ಪಟಾಕಿ ಸಿಡಿಸಲು ಅನುಮತಿ ಪಡೆದಿದರಲಿಲ್ಲ. ಪೊಲೀಸರು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

 

LEAVE A REPLY

Please enter your comment!
Please enter your name here