Home ಸುದ್ದಿಗಳು ಅಡ್ಡೂರು ಹೊಸ ಸೇತುವೆ ನಿರ್ಮಾಣಕ್ಕೆ 50 ಕೋ.ರೂ.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದೆ: ಶಾಸಕ ಭರತ್‌ ಶೆಟ್ಟಿ

ಅಡ್ಡೂರು ಹೊಸ ಸೇತುವೆ ನಿರ್ಮಾಣಕ್ಕೆ 50 ಕೋ.ರೂ.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದೆ: ಶಾಸಕ ಭರತ್‌ ಶೆಟ್ಟಿ

0
ಅಡ್ಡೂರು ಹೊಸ ಸೇತುವೆ ನಿರ್ಮಾಣಕ್ಕೆ 50 ಕೋ.ರೂ.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದೆ: ಶಾಸಕ ಭರತ್‌ ಶೆಟ್ಟಿ

ಬಂಟ್ವಾಳ: ಅಡ್ಡೂರು ಹೊಸ ಸೇತುವೆ ನಿರ್ಮಾಣಕ್ಕೆ 50 ಕೋ.ರೂ.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಶ್ರೀಘ್ರ ಅನುದಾನ ಬಿಡುಗಡೆಗೆ ಮಾತುಕತೆ ನಡೆಸಲಾಗುವುದು ಎಂದು ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್‌ ಶೆಟ್ಟಿ ಹೇಳಿದರು.

ಅವರು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇತುವೆಯ ದುರಸ್ತಿಗೆ ಸಂಬಂಧಿಸಿ ಸಭೆ ನಡೆಸಿ ಮಾತನಾಡಿ, ಸೇತುವೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ಬಂದಿದೆ. ಹೀಗಾಗಿ ದುರಸ್ತಿ ಮಾಡಿ ಧಾರಣಾ ಸಾಮರ್ಥ್ಯ ಹೆಚ್ಚಿಸಿ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡುವ ದೃಷ್ಟಿಯಿಂದ ಈ ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ಜತೆಗೆ ಉಳ್ಳಾಯಿಬೆಟ್ಟುನಲ್ಲೂ 5 ಕೋ.ರೂ.ಗಳ ಕಿರು ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದರು.

ಈ ಸಭೆಯಲ್ಲಿ ಶಾಸಕ ರಾಜೇಶ್‌ ನಾಯ್ಕ್ ಉಳಿಪ್ಪಾಡಿಗುತ್ತು, ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್‌, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಹೋರಾಟ ಸಮಿತಿಯ ಪ್ರಮುಖರು ಹಾಜರಿದ್ದರು.

 

LEAVE A REPLY

Please enter your comment!
Please enter your name here