Home ಸುದ್ದಿಗಳು ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ

ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ

0
ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ
Close up of male hands in bracelets behind back

ಕುಂದಾಪುರ: ಮೂರೂವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಸೆ.13ರಂದು ತಾಯಿ, ಅನಾರೋಗ್ಯದ ಕಾರಣ ನೀಡಿ ಗಾಯಗೊಂಡ ಮಗುವನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತಂದಿದ್ದ ವೇಳೆ ಮಗುವಿನ ದೇಹದಲ್ಲಿ ತೀವ್ರ ಗಾಯಗಳು ಪತ್ತೆಯಾಗಿತ್ತು.

ಗಾಯಗಳ ಬಗ್ಗೆ ತಾಯಿ ಪೂರ್ಣಪ್ರಿಯಾ ಯಾವುದೇ ಮಾಹಿತಿ ನೀಡದೇ, ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಇತ್ತು. ಅದನ್ನು ನೋಡಿ ಜಿಲ್ಲಾ ಆರೋಗ್ಯಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಕಳುಹಿಸಿದ್ದರು.

ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಹೇಶ್‌ ದೇವಾಡಿಗ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಮಾಸೆಬೈಲು ಠಾಣೆಗೆ ದೂರು ನೀಡಿದ್ದರು.

ಮಗು ಚೇತರಿಸಿದ ಬಳಿಕ ತಾಯಿಯನ್ನು ವಿಚಾರಣೆ ನಡೆಸಲಾಗಿದ್ದು, ಮಗು ಜಾರಿ ಬಿದ್ದು ಗಾಯಗೊಂಡಿದೆ ಎಂದು ತಾಯಿ ಹೇಳಿಕೆ ನೀಡಿದ್ದಾಗ ಮಕ್ಕಳ ರಕ್ಷಣಾ ಸಮಿತಿ ತೀವ್ರ ವಿಚಾರಣೆ ನಡೆಸಿದಾಗ ಹಲ್ಲೆ ಪ್ರಕರಣ ಬಯಲಿಗೆ ಬಂದಿತ್ತು.

ಮಗು ಮಂಚದಲ್ಲಿ ಮಲಗಬಾರದು ಎಂದು ತಂದೆಯನ್ನು ಕಳಕೊಂಡ ಮಗುವಿನ ತಾಯಿ ಹಾಗೂ ಆಕೆಯ ಪ್ರಿಯಕರ ಸುಹೇಲ್‌ ಮಗುವಿನ ಖಾಸಗಿ ಅಂಗ ಸಹಿತ ಮೈಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದರು

ಅ.24ರಂದು ಜಾಮೀನಿಗೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಅರ್ಜಿಯನ್ನುತಿರಸ್ಕರಿಸಿ,ನ್ಯಾಯಾಂಗ ಬಂಧನ ವಿಧಿಸಿದೆ.

 

LEAVE A REPLY

Please enter your comment!
Please enter your name here