Home ಸುದ್ದಿಗಳು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಪ್ರಕರಣ: 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ

ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಪ್ರಕರಣ: 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ

0
ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಪ್ರಕರಣ: 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ

ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ 10 ಮಂದಿ ಬಾಂಗ್ಲಾ ವಲಸಿಗರ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿದೆ.

ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ ಬಂಧಿಸಲ್ಪಟ್ಟ 10 ಮಂದಿ ಆರೋಪಿಗಳನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್‌ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್‌ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಬಂಧಿತ 10 ಮಂದಿ ಆರೋಪಿಗಳಿಗೆ ಜಾಮೀನು ನೀಡುವಂತೆ ಕೋರಿ ಆರೋಪಿಗಳ ಪರ ವಕೀಲ ಅಸಾದುಲ್ಲಾ ಕಟಪಾಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಅರ್ಜಿಯ ವಾದ ಪ್ರತಿವಾದ ನಡೆದ ಬಳಿಕ ಅಂತಿಮ ಆದೇಶವನ್ನು ನ.5ಕ್ಕೆ ನಿಗದಿ ಪಡಿಸಿ ನ್ಯಾಯಾಲಯ ಆದೇಶ ನೀಡಿದೆ.

 

LEAVE A REPLY

Please enter your comment!
Please enter your name here