
ಗಂಗೊಳ್ಳಿ: ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿಯ ಬೀಚ್ ಬಳಿ ಕಾರೊಂದು ಹಿಂದಿನಿಂದ ಬಂದು ಢಿಕ್ಕಿಯಾಗಿ ಪಾದಚಾರಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.
ತ್ರಾಸಿಯ ಕುಪ್ಪ ಮೊಗವೀರ (80) ಕಾರು ಢಿಕ್ಕಿಯಾಗಿ ಸಾವನ್ನಪ್ಪಿದವರು.
ಕುಪ್ಪ ಮೊಗವೀರ ಮನೆಯಿಂದ ತ್ರಾಸಿಯ ಪೇಟೆಗೆ ಹೋಗಿ ವಾಪಸು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಬರುತ್ತಿರುವಾಗ ತ್ರಾಸಿ ಗ್ರಾಮದ ಹೊಸಪೇಟೆ ಎನ್ನುವಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಕಾರು ವೇಗವಾಗಿ ಬಂದು ಢಿಕ್ಕಿಯಾಗಿದೆ.
ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಕುಪ್ಪ ಮೊಗವೀರ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಅದಾಗಲೇ ಮೃತಪಟ್ಟಿದ್ದರು.
ಘಟನ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು,ಕಾರು ಚಾಲಕನ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
