
ವಿಜಯಪುರ: ವಕ್ಫ್ ಆಸ್ತಿಯನ್ನ ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್‌ನಿಂದ ಭಾರತೀಯರಿಗೆ ಅನ್ಯಾಯವಾಗುತ್ತಿde ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಆಗುವುದಕ್ಕೆ ನಾವು ಬಿಡಬಾರದು ಅದಕ್ಕಾಗಿ ನಾನು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದರು.
ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ, ಮಠ ಮಾನ್ಯಗಳ ಜಮೀನನ್ನು ವಕ್ಫ್ ಆಕ್ರಮಿಸಿಕೊಳ್ಳುತ್ತದೆ.
ವಕ್ಫ್ ಕಾನೂನು ಅಸಮಾನತೆ, ಕ್ರೂರತೆಯನ್ನು ಒಳಗೊಂಡಿದೆ. ವಕ್ಫ್ ಬೋರ್ಡ್‌ಗೆ ಅನಿಯಂತ್ರಿತ, ಪರಿಮಿತ ಅಧಿಕಾರ ನೀಡಲಾಗಿದೆ ಎಂದು ಪತ್ರದಲ್ಲಿ ಶಾಸಕರು ಉಲ್ಲೇಖಿಸಿದ್ದಾರೆ.
