Home ಸುದ್ದಿಗಳು ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ

0
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ

ಉಳ್ಳಾಲ: ಅಕ್ರಮ ಮರಳುಗಾರಿಕೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಸೋಮೇಶ್ವರ ಉಚ್ಚಿಲದ, ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯ ಕಿಶೋರ್ ಎಮ್ ಉಚ್ಚಿಲ (53) ಎಂದು ಗುರುತಿಸಲಾಗಿದೆ.

ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸುನಿಲ್ ಪೂಜಾರಿ ಹಲ್ಲೆಗೈದ ವ್ಯಕ್ತಿ.

ಕಿಶೋರ್ ಅವರು ಸ್ನೇಹಿತ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲ್ ನಿಂದ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಪುರಸಭಾ ಕಚೇರಿ ಬಳಿ ಸುನಿಲ್ ಪೂಜಾರಿ ಸ್ಕೂಟರ್ ತಡೆದು ಹಲ್ಲೆ ನಡೆಸಿದ್ದಾರೆ.

ಮರಳುಗಾರಿಕೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತೀಯ ಎಂದು ಕೊಲೆ ಬೆದರಿಕೆ ಹಾಕಿ ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದಾನೆ. ಕಬ್ಬಿಣದ ಸಲಾಕೆಯಿಂದ ಹಲ್ಲೆಗೈಯ್ದು ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.

ಉಳ್ಳಾಲ ಠಾಣೆಯಲ್ಲಿ ಆರೋಪಿ ಸುನಿಲ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here