Home ಸುದ್ದಿಗಳು ಉಡುಪಿ: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

0
ಉಡುಪಿ: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ,ನ.6 ರಂದು ಉಡುಪಿ ಜಿಲ್ಲಾ ಬಿಜೆಪಿ, ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ನ.6 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ಆರಂಭವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಅಹವಾಲು ಸಲ್ಲಿಸಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ವಕ್ಫ್ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ‘ಲ್ಯಾಂಡ್ ಜಿಹಾದ್’ ಷಡ್ಯಂತ್ರವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ.

ಈ ಪ್ರತಿಭಟನಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

 

LEAVE A REPLY

Please enter your comment!
Please enter your name here