Home ಸುದ್ದಿಗಳು ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು: ಸಂಸದ ಬಿ. ವೈ. ರಾಘವೇಂದ್ರ

ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು: ಸಂಸದ ಬಿ. ವೈ. ರಾಘವೇಂದ್ರ

0
ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು: ಸಂಸದ ಬಿ. ವೈ. ರಾಘವೇಂದ್ರ

ಬೈಂದೂರು: ಸಿಎಂ ಸಿದ್ದರಾಮಯ್ಯ ಅವರು ಇತರರ ಬಗ್ಗೆ ಹಗುರವಾಗಿ ಮಾತನಾಡುವ ಪ್ರವೃತ್ತಿಯನ್ನು ನಿಲ್ಲಿಸಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ವಿಶ್ವದ ಅತೀ ವೇಗವಾಗಿ ಬೆಳೆಯುವ ಆರ್ಥಿಕ ಶಕ್ತಿಯಾಗಿ ಭಾರತ ವನ್ನು ಬೆಳೆಸಿ ನಿಲ್ಲಿಸಿರುವ ಮೋದಿ ಅವರು ಕರ್ನಾಟಕ ಸರಕಾರದ ಆರ್ಥಿಕ ದುಃಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವುದು ಸಹಜವಾಗಿಯೇ ಇದೆ.

ಮೋದಿ ಇಂದು ವಿಶ್ವ ನಾಯಕರಾಗಿದ್ದಾರೆ. ಇಡಿ ವಿಶ್ವ ಅವರನ್ನು ಗೌರವಿಸು ತ್ತಿದೆ. ಅವರ ಹಿತವಚನವನ್ನು ಗೌರವಿಸುವ ಬದಲು ಅವರ ಬಗ್ಗೆ ಅವಹೇಳನಕಾರಿ ಪದ ಪ್ರಯೋಗಿಸಿರುವುದು ಹಿರಿಯ ನಾಯಕರಿಗೆ ಭೂಷಣವಲ್ಲ ಎಂದು ಹೇಳಿದರು.

 

LEAVE A REPLY

Please enter your comment!
Please enter your name here