
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದು, ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳವಾರ ಬಂಡಿಪೋರಾ ಜಿಲ್ಲೆಯ ಕೆತ್ಸುನ್ ಅರಣ್ಯದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯ್ಯಲಾಗಿತ್ತು. ಆ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಆರಂಭವಾಗಿತ್ತು. ಬುಧವಾರ ಸಹ ಈ ಕಾರ್ಯಾಚರಣೆ ಮುಂದುವರೆದಿತ್ತು. ಓರ್ವ ಉಗ್ರನ ಹತ್ಯೆಯ ನಂತರ ಈ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
