
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಹಿರಿಯ ಸಹೋದರ ಸೋಮು ಬಾೖ ಮೋದಿ ದಂಪತಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಅನಂತರ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರನ್ನು ಗೀತಾಮಂದಿರದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.
ಭೋಜನ ಶಾಲೆಯ ಮುಖ್ಯಪ್ರಾಣನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಾಲು ದೀಪಗಳನ್ನು ಬೆಳಗಿಸಿದರು. ಇದೇ ಸಂದರ್ಭದಲ್ಲಿ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಪಡೆದರು.
ಸೋಮು ಬಾೖ ಮೋದಿಯವರ ಪತ್ನಿ ಚಂದ್ರಿಕಾಬಾೖ ಮೋದಿ, ಗುಜರಾತ್ನಿಂದ ಆಗಮಿಸಿದ್ದ ಗೋವಿಂದ ಬಾೖ, ಉಡುಪಿಯ ನೇತ್ರತಜ್ಞ ಡಾ| ಕೃಷ್ಣಪ್ರಸಾದ್ ಕೂಡ್ಲು, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ವಿ| ಪ್ರಸನ್ನ ಆಚಾರ್ಯ, ಪ್ರಮುಖರಾದ ರತೀಶ್ ತಂತ್ರಿ, ಸಂತೋಷ್ ಶೆಟ್ಟಿ ತೆಂಕರಗುತ್ತು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
