Home ಸುದ್ದಿಗಳು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್ ದಾಖಲು

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್ ದಾಖಲು

0
ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್ ದಾಖಲು

ಹಾವೇರಿ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು. ವಕ್ಫ್ ನೋಟಿಸ್ ನೀಡಿದ ಕಾರಣ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು.

ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಮಾಡಿದ್ದರು. ಈ ಕಾರಣಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಗುರುವಾರ ಹುಬ್ಬಳ್ಳಿಯಲ್ಲಿ ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು.

 

LEAVE A REPLY

Please enter your comment!
Please enter your name here