
ಮಂಗಳೂರು: ಹಲವು ದಿನಗಳ ಹಿಂದೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.
ಈ ಘಟನೆ ಬಗ್ಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ತಪ್ಪಿತಸ್ಥರ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳಲು ಕೋರಿ ನ. 6ರಂದು ಕೇರಳ ಸಿಎಂಗೆ ಪತ್ರ ಬರೆದಿದ್ದರು.
ಹಿಂದೂ ಸಮಾಜದ ಮಾರ್ಗದರ್ಶಕರಾದ ಎಡನೀರು ಶ್ರೀಗಳ ಮೇಲಿನ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳುವಂತೆ ಬರೆದಿದ್ದ ಪತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ಪಂದಿಸಿದ್ದಾರೆ.
ಜತೆಗೆ ಈ ಘಟನೆ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.
