Home ಸುದ್ದಿಗಳು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

0
ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನ್ಯಾ.ಖನ್ನಾ ಅವರ ಹೆಸರನ್ನು ನ್ಯಾ.ಡಿವೈ ಚಂದ್ರಚೂಡ್ ಅವರು ಶಿಫಾರಸು ಮಾಡಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇವರು ಮುಂದಿನ ವರ್ಷ ಮೇ 13 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾ.ಚಂದ್ರಚೂಡ್ ಅವರು ನ.10 ರಂದು ಹುದ್ದೆಯಿಂದ ನಿವೃತ್ತರಾದರು.

ಮೇ 14, 1960 ರಲ್ಲಿ ಜನಿಸಿದ್ದ ನ್ಯಾ.ಸಂಜೀವ್ ಖನ್ನಾ ಅವರು, ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದರು.

ಜನವರಿ 2019 ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡರು. ಈ ಅವಧಿಯಲ್ಲಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಅವರ ಜಾಮೀನು ಅರ್ಜಿಗಳ ವಿಚಾರಣೆ ಸೇರಿದಂತೆ ಹಲವಾರು ರಾಜಕೀಯವಾಗಿ ಸೂಕ್ಷ್ಮ ಪ್ರಕರಣಗಳ ಪೀಠಗಳ ನೇತೃತ್ವ ವಹಿಸಿದ್ದರು.

ಪ್ರಮಾಣವಚನ ಸ್ವೀಕಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here