
ಕಾಪು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚ್ಚಿಲ ವಲಯದ ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮೂರು ಲಕ್ಷ ರೂ ಅನುದಾನ ಮಂಜೂರು ಮಾಡಿದೆ.
ಈ ದೇವಸ್ಥಾನಕ್ಕೆ ಮಂಜೂರುಗೊಂಡಿರುವ ಡಿಡಿಯನ್ನು ದೇವಸ್ಥಾನ ಸಮಿತಿಯವರಿಗೆ ಹಸ್ತಾಂತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ನವೀನ್ ಅಮಿನ್ ಸರ್, ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ, ಮಜುರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಸಾದ್, ವಳದೂರು ದೇವಸ್ಥಾನದ ಆಡಳಿತ ಸಮಿತಿಯ ಪದ್ಮನಾಭ ಶ್ಯಾನುಭೋಗ, ನಾಗಭೂಷಣ್ ರಾವ್, ರವಿರಾಜ ಶೆಟ್ಟಿ, ಶ್ರೀಧರ್ ಶೆಟ್ಟಿಗಾರ್, ನಿರ್ಮಲ್ ಕುಮಾರ್ ಹೆಗ್ಡೆ, ಕುಮಾರಿ ಪ್ರಜ್ಞ ಮಾರ್ಪಲ್ಲಿ, ಗೋಪಾಲ್ ನಾಯಕ್, ಜನಜಾಗೃತಿ ವೇದಿಕೆಯ ಸದಸ್ಯರಾದ ಜನಾರ್ಧನ್ ಆಚಾರ್ಯ ಕಲತ್ತೂರು, ಪಂಚಾಯತಿ ಸದಸ್ಯರಾದ ಭಾಸ್ಕರ, ಶರ್ಮಿಳ ಆಚಾರ್ಯ, ಮಜೂರು ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
