
ಗಂಗೊಳ್ಳಿ: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಸ್ನೇಹಿತರಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ, ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.
ಆರೋಪಿಗಳಿಗಳನ್ನು ಶರತ್ ದೇವಾಡಿಗ, ಪ್ರಸಾದ್ ಆಚಾರ್ಯ, ವಿಶ್ವನಾಥ ಪಡುಕೋಣೆ, ಪ್ರದೀಪ್ ಪಡುಕೋಣೆ, ಪ್ರವೀಣ್ ಎಂದು ಗುರುತಿಸಲಾಗಿದೆ. ಈ ಐವರಿಗೆ ಜಾಮೀನು ಮಂಜೂರಾಗಿದ್ದು, ಆಲೂರಿನ ಸಚಿನ್ ಪೂಜಾರಿಗೆ ಜಾಮೀನು ತಿರಸ್ಕೃತಗೊಂಡಿದೆ.
ಆರೋಪಿಗಳ ಪರ ನ್ಯಾಯವಾದಿ ಕೆ.ಸಿ. ಶೆಟ್ಟಿ ವಾದಿಸಿದ್ದರು. ಈ ಪ್ರಕರಣದಲ್ಲಿ 20ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಹಡವು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತೆರಳುವ ಕ್ರಾಸ್ ಬಳಿ ಅ. 18ರ ರಾತ್ರಿ ಈ ಘಟನೆ ನಡೆದಿತ್ತು.
