Home Uncategorized ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣ: ಆರೋಪಿಗೆ ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ

ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣ: ಆರೋಪಿಗೆ ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ

0
ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣ: ಆರೋಪಿಗೆ ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ

ಪುತ್ತೂರು: 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ಬಾಲಕಿಯ ಜತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯ ಆರೋಪಿಗೆ ಶಿಕ್ಷೆ, ದಂಡ ವಿಧಿಸಿದೆ.

ಕಬಕ ವಿದ್ಯಾಪುರ ನಿವಾಸಿ ಮಹಮ್ಮದ್‌ ಮುಸ್ತಾಫ ಯಾನೆ ಮುಸ್ತಾಫ ಶೇಖ್‌ ಶಿಕ್ಷೆಗೆ ಗುರಿಯಾದ ಆರೋಪಿ.

ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದು, ಈ ಸಂದರ್ಭದಲ್ಲಿ ಬಾಲಕಿ ತಪ್ಪಿಸಿಕೊಂಡು ಹೋಗಿ ಮನೆಯವರಲ್ಲಿ ವಿಷಯ ತಿಳಿಸಿದ್ದಳು. ಬಾಲಕಿ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

14 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ 3 ವರ್ಷ ಜೈಲು ಮತ್ತು 21,400 ರೂ. ದಂಡ ನೀಡಲು ಆದೇಶಿಸಲಾಗಿದೆ.

ದಂಡದ ಮೊತ್ತದಲ್ಲಿ 15 ಸಾವಿರ ರೂ. ಅನ್ನು ಬಾಲಕಿಗೆ ಪರಿಹಾರದ ರೂಪದಲ್ಲಿ ನೀಡಬೇಕೆಂದು ಆದೇಶಿಸಲಾಗಿದೆ.

 

LEAVE A REPLY

Please enter your comment!
Please enter your name here