
ಶಿವಮೊಗ್ಗ: ರಾಜ್ಯದಲ್ಲಿ ಮುಸ್ಲಿಮರು ಮಾಡುತ್ತಿರುವ ಅಚಾತುರ್ಯ ಗಮನಿಸಿ ಕಾಂಗ್ರೆಸ್‌ನವರು ಮೌನವಾಗಿದ್ದಾರೆ. ಪ್ರತಿನಿತ್ಯ ಮುಸ್ಲಿಮರ ಒಂದಲ್ಲ ಒಂದು ಅನ್ಯಾಯ ಕಾಣುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ. ರೈತರು, ದೇವಸ್ಥಾನ, ಸಾಧು ಸಂತರು, ಪುರಾತತ್ವ ಇಲಾಖೆ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಮಾಡಿಕೊಂಡಿದ್ದಾರೆ.
ವಕ್ಫ್ ನೋಟಿಸ್ ವಾಪಸ್ ತೆಗೆದುಗೊಂಡಿದ್ದೇವೆ ಎಂದು ಹೇಳುತ್ತಾರೆ ಆದರೆ ಸಿಎಂ, ಡಿಸಿಎಂ ಈ ಬಗ್ಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳುವುದಿಲ್ಲ. ವಕ್ಫ್ ಆಸ್ತಿ ಆಗಲು ಬಿಡಲ್ಲ ಎಂದು ಒಬ್ಬ ಕಾಂಗ್ರೆಸ್‌ನವರ ಬಾಯಲ್ಲಿ ಬರಲಿಲ್ಲ ಎಂದರು.
ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕಾರ ಮಾಡಲು ಸಿದ್ಧರಿದ್ದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾನೆ. ಆದರೆ ಈ ಬಗ್ಗೆ ಒಬ್ಬ ಕಾಂಗ್ರೆಸ್ ನಾಯಕನೂ ಖಂಡಿಸಲಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್‌ನವರು ವೋಟಿಗಾಗಿ ಭಾರತವನ್ನೇ ಮತಾಂತರ ಮಾಡಲು ಹೊರಟ್ಟಿದ್ದಾರೆ. ನೇರಾ ನೇರ ಖಂಡನೆ ಮಾಡಬೇಕು. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಅವರ ಮೀಸಲಾತಿ ಕಿತ್ತುಕೊಳ್ಳಲು ಹೊರಟ್ಟಿದ್ದಾರೆ ಎಂದರು.
