Home ಸುದ್ದಿಗಳು ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಸಾವು

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಸಾವು

0
ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಸಾವು

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ಉಪನ್ಯಾಸಕಿಯನ್ನು ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌(23) ಎಂದು ಗುರುತಿಸಲಾಗಿದೆ.

ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಅವರು ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು.ಅವರನ್ನು ಕೂಡಲೇ ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಿಳಿಸಿದ್ದರು.

ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ(ಅನಾಫಿಲ್ಯಾಕ್ಟಿಕ್‌ ರಿಯಾಕ್ಷನ್‌) ಸಮಸ್ಯೆ ಇತ್ತು. ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here