
ಉಡುಪಿ: ಉಪಚುನಾವಣೆಯ ಮೂರು ಕ್ಷೇತ್ರದಲ್ಲೂ ಎನ್‌ಡಿಎ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.23ರ ಬಳಿಕ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇರುವುದಿಲ್ಲ. ಹೊಸ ಮುಖ್ಯಮಂತ್ರಿಯೊಂದಿಗೆ ಬೆಳಗಾವಿ ಅಧಿವೇಶನ ನಡೆಯಲಿದೆ ಎಂದರು.
ಕಾಂಗ್ರೆಸ್‌ಗೆ ಮುಸ್ಲಿಂ ತುಷ್ಟೀಕರಣ ಹೊಸದೇನಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಮರ ಋಣ ತೀರಿಸಬೇಕು ಅನಿಸುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಸಮುದಾಯಕ್ಕೆ ನ್ಯಾಯ ಕೊಡಬೇಕು ಎಂದು ಅವರಿಗೆ ಅನಿಸುತ್ತಿಲ್ಲ.
ಕಳೆದ ಬಾರಿ ಅಧಿಕಾರ ಪಡೆದಾಗ ಟಿಪ್ಪು ಜಯಂತಿ ಮಾಡಿ ಅದನ್ನು ವರ್ಣ ರಂಜಿತ ಗೊಳಿಸಿದ್ದರು. ಈಗ ವಕ್ಫ್ ಆಸ್ತಿಗೆ ಬೇಲಿ ಹಾಕಲು 350 ಕೋಟಿ ರೂ. ಬಿಡುಗಡೆ ಮಾಡುವೆ ಎಂದು ಟಿಪ್ಪಣಿ ಬರೆದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
