Home ಸುದ್ದಿಗಳು ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತಿದ್ದ ಮೂವರ ಬಂಧನ

ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತಿದ್ದ ಮೂವರ ಬಂಧನ

0
ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತಿದ್ದ ಮೂವರ ಬಂಧನ
Close up of male hands in bracelets behind back

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತಿದ್ದ ಮೂವರನ್ನು ಸೆನ್ ಪೊಲೀಸರು ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕೆಜಿ ರೋಡ್‌ ಕ್ರಾಸ್‌ ಬಳಿ ನಡೆದಿದೆ.

ಆರೋಪಿಗಳನ್ನು ಉಪ್ಪೂರಿನ ಸತ್ಯರಾಜ್‌ (32), ಕೃಷ್ಣ (43) ಮತ್ತು ಶಕಿಲೇಶ್‌ (25) ಎಂದು ಗುರುತಿಸಲಾಗಿದೆ.

ಮುಂಬೈಯಿಂದ ತರಿಸಿಕೊಂಡಿರುವ ನಿಷೇದಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಎಂಟು ಲಕ್ಷಕ್ಕೂ ಹೆಚ್ಚಿನ ಮೊತ್ತದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಿಂದ 8,11,040 ರೂ ಮೌಲ್ಯದ 10 ಕೆ.ಜಿ, 138 ಗ್ರಾಂ ತೂಕದ ಗಾಂಜಾ, ಮೂರು ಮೊಬೈಲ್‌ ಫೋನ್‌ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

LEAVE A REPLY

Please enter your comment!
Please enter your name here