
ಉಡುಪಿ: ನಕ್ಸಲ್ ಕಾರ್ಯಕರ್ತ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡಿ ಹತ್ಯೆ ಮಾಡಿದ ಘಟನೆ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ನಕ್ಸಲ್ ನಿಗ್ರಹ ದಳ ಮತ್ತು ನಕ್ಸಲರ ಮಧ್ಯೆ ಸೋಮವಾರ ಸಂಜೆ ಗುಂಡಿನ ಕಾಳಗ ನಡೆದಿದ್ದು, ಈ ಘಟನೆಯಲ್ಲಿ ಓರ್ವ ಹತನಾಗಿದ್ದಾನೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಕಳೆದ 15 ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್ ಕೂಂಬಿಂಗ್ ನಡೆಸುತ್ತಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ.
ಅಷ್ಟರಲ್ಲಿ ನಕ್ಸಲರು ಎಎನ್‌ಎಫ್ ಮೇಲೆ ದಾಳಿ ನಡೆಸಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.
