
ಬೆಂಗಳೂರು: ಕಳೆದ 20 ವರ್ಷಗಳಿಂದ ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ಪೊಲೀಸರು ಹುಡುಕುತ್ತಿದ್ದರು. ಸೋಮವಾರ ಸಂಜೆ ಪೊಲೀಸರು ಆತನನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ.
ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದು, ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ. ವಿಕ್ರಂ ಗೌಡ ಸಕ್ರಿಯರಾಗಿದ್ದ ಎಂದು ಪೊಲೀಸರು ಆತನನ್ನು ಹುಡುಕುತ್ತಿದ್ದರು ಎಂದರು.
ಪೊಲೀಸರ ಮೇಲೆ ವಿಕ್ರಂ ಗೌಡ ತಂಡ ದಾಳಿ ಮಾಡಿದೆ. ಹಾಗಾಗಿ ಪೊಲೀಸರು ಎನ್‌ಕೌಂಟರ್ ಮಾಡಬೇಕಾಯಿತು. ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ ಎಂದರು.
