
ತುಮಕೂರು: ರಸ್ತೆಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ.
ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮೃತರನ್ನು ಗುರುರಾಜು (35), ಪುತ್ರ ರಿಷಾಂಕ್(2) ಎಂದು ಗುರುತಿಸಲಾಗಿದೆ. ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಹರ್ಷಿತಾ (28) ಗಂಭೀರ ಗಾಯಗೊಂಡಿದ್ದಾರೆ.
ಮುಂಡರಿಗಿಯಿಂದ ಬೆಂಗಳೂರು ಕಡೆಗೆ ಕ್ವಿಡ್ ಕಾರಿನಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಗಾಯಾಳುವನ್ನು ಶಿರಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
