ದೆಹಲಿ:ಇತ್ತೀಚೆಗಷ್ಟೇ ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಿಗಿರುವ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅದರಲ್ಲೂ ಮಹಿಳಾ ಕುಸ್ತಿಪಟುಗಳು ಏನಾದರೂ ಸರಿ ನಾವು ನಮ್ಮ ನಿಲುವನ್ನು ಹಿಂದೆ ತೆಗೆದುಕೊಳ್ಳುವುದಿಲ್ಲ, ಅವರ ಬಂಧನ ಆಗುವ ತನಕ ನಾವು ಇಲ್ಲೇ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಇದರ ನಡುವೆ ಡಬ್ಲ್ಯೂ ಎಫ್ ಐ ಅಧ್ಯಕ್ಷರ ಉತ್ತರ ಪ್ರದೇಶದ ನಿವಾಸಕ್ಕೆ ಇಂದು ಬೆಳಗ್ಗೆ ದೆಹಲಿಯ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹಲವಾರು ಸಾಕ್ಷಿಗಳನ್ನು ಕೂಡ ಸಂಗ್ರಹಿಸಿದ್ದಾರೆ. ಮುಂದುವರೆದು ಸಿಂಗ್ ಅವರ ಬೆಂಬಲಿಗರನ್ನು ಸಹ ವಿಚಾರಣೆಗೆ ಒಳಪಡಿಸಿದ್ದಾರೆ. ಅಷ್ಟೇ ಅಲ್ಲದೆ ಇವರ ವಿಶೇಷ ತನಿಖಾ ತಂಡವು ಹಲವಾರು ಜನರನ್ನು ಸಂಪರ್ಕಿಸಿ ಅವರ ಹೇಳಿಕೆಗಳನ್ನು ಸಂಗ್ರಹಿಸಿದ್ದಾರೆ.
