Home ಸುದ್ದಿಗಳು ಕುಖ್ಯಾತ ರೌಡಿಶೀಟರ್‌ ದಾವೂದ್‌ನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಕುಖ್ಯಾತ ರೌಡಿಶೀಟರ್‌ ದಾವೂದ್‌ನನ್ನು ಬಂಧಿಸಿದ ಸಿಸಿಬಿ ಪೊಲೀಸರು

0
ಕುಖ್ಯಾತ ರೌಡಿಶೀಟರ್‌ ದಾವೂದ್‌ನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮಂಗಳೂರು: ಕುಖ್ಯಾತ ರೌಡಿಶೀಟರ್‌ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್‌ನನ್ನು ಉಳ್ಳಾಲ ಧರ್ಮನಗರ ನಿವಾಸಿ ದಾವೂದ್‌(43)ಎಂದು ಗುರುತಿಸಲಾಗಿದೆ.

ದಾವೂದ್‌ ವಿರುದ್ಧ ಉಳ್ಳಾಲ, ಬಜಪೆ, ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ವಸೂಲಿ ಸಹಿತ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಹಾಗೂ ದಾವೂದ್‌ ಟಾರ್ಗೆಟ್‌ ಗ್ರೂಪ್‌ನ ಇಲಿಯಾಸ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ.

ತಲಪಾಡಿ ಬಳಿ ಆರೋಪಿಯನ್ನು ಬಂಧಿಸಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ದಾವೂದ್‌ ಮಾರಕಾಯುಧದಿಂದ ಹಲ್ಲೆ ನಡೆಸಿದ್ದ, ಆದರೂ ಪೊಲೀಸರು ದಾವೂದ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಘಟನೆಯಲ್ಲಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನರೇಂದ್ರ ಮತ್ತು ಸಿಬಂದಿ ಗಾಯಗೊಂಡಿದ್ದಾರೆ.

 

LEAVE A REPLY

Please enter your comment!
Please enter your name here