Home ಸುದ್ದಿಗಳು ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

0
ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಬಂಟ್ವಾಳ: ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಳ್ಳರ ತಂಡವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕಾಸರಗೋಡಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪು, ಕೋತಂಕರ ನಿವಾಸಿ ಬಶೀರ್‌ ಕೆ ಪಿ. ಯಾನೆ ಆಕ್ರಿ ಬಶೀರ್‌ (44), ಕೇರಳದ ಕೊಲ್ಲಂ ಜಿಲ್ಲೆಯ ಆಲಪ್ಪಾಡ್‌ ನ ಪ್ರಕಾಶ್‌ ಬಾಬು ಯಾನೆ ಮಹಮ್ಮದ್‌ ನಿಯಾಜ್‌(46) ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ನಿವಾಸಿ ಎಫ್‌.ಜೆ.ಮಹಮ್ಮದ್‌ ಇಸ್ಮಾಯಿಲ್‌ ಎಂದು ಗುರುತಿಸಲಾಗಿದೆ.

ಇವರ ಪೈಕಿ ಬಶೀರ್‌ ಕೆ.ಪಿ. ಎಂಬಾತ ಕುಖ್ಯಾತ ಕಳ್ಳನಾಗಿದ್ದು, ಈತನ ವಿರುದ್ದ ಬೇರೆ ಬೇರೆ ಠಾಣೆಗಳಲ್ಲಿ ಸುಮಾರು 13 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿ ಪ್ರಕಾಶ್‌ ಬಾಬು ಯಾನೆ ಮಹಮ್ಮದ್‌ ನಿಯಾಝ್ ಎಂಬಾತನ ವಿರುದ್ಧ 3 ಕಳ್ಳತನ ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಇರಾದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 1.25 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

 

LEAVE A REPLY

Please enter your comment!
Please enter your name here