Home ಸುದ್ದಿಗಳು ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷದೀಪೋತ್ಸವ: ವಸ್ತು ಪ್ರದರ್ಶನ ಉದ್ಘಾಟನೆ

ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷದೀಪೋತ್ಸವ: ವಸ್ತು ಪ್ರದರ್ಶನ ಉದ್ಘಾಟನೆ

0
ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷದೀಪೋತ್ಸವ: ವಸ್ತು ಪ್ರದರ್ಶನ ಉದ್ಘಾಟನೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಇಂದಿನಿಂದ(ನ.26) ಆರಂಭಗೊಂಡಿದ್ದು ಬೆಳಗ್ಗೆ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ಧರ್ಮಸ್ಥಳ ಪ್ರೌಢಶಾಲಾ ಆವರಣದಲ್ಲಿ 318 ಮಳಿಗೆಗಳನ್ನು ಹೈದರಾಬಾದ್ ಯೂನಿಸೆಫ್ ಮುಖ್ಯಸ್ಥ ಡಾ.ಝೆಲಾಲೆಮ್ ಬಿರಹಾನು ಟಾಪ್ಸಿ ಇತಿಯೋಪಿಯ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಅವರು ಉದ್ಘಾಟಿಸಿದರು.

ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನದಲ್ಲಿ ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಧರ್ಮಸ್ಥಳದಲ್ಲಿ ಈಗಾಗಲೆ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ.

 

LEAVE A REPLY

Please enter your comment!
Please enter your name here