
ವಿಟ್ಲ: ವಿಟ್ಲ-ಉಕ್ಕುಡ -ಪಡಿಬಾಗಿಲು ಅಂತಾರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಆಟೋ ರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿ, ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಸ್ಥಳಕ್ಕಾಗಮಿಸಿದ ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿಭಟನಾಕಾರರು ತಮ್ಮ ಅಳಲನ್ನು ತೋಡಿಕೊಂಡು ಕೂಡಲೇ ರಸ್ತೆ ಹೊಂಡವನ್ನು ಮುಚ್ಚುವಂತೆ ವಿನಂತಿಸಿದರು.
ಈ ವೇಳೆ ಅಧಿಕಾರಿಗಳು ಮಾತನಾಡಿ ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿದೆ. ಕೆಲವೇ ದಿನಗಳಲ್ಲಿ ಈ ಭಾಗದ ಡಾಮರೀಕರಣ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.
