
ಮಂಗಳೂರು: 17 ವರ್ಷದ ಅಪ್ರಾಪ್ತೆಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.
ನ.20 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾಳೆ ಎಂದು ತಿಳಿದು ಬಂದಿದೆ.
ಹುಡುಗಿಯ ಸಂಬಂಧಿ ಆಗಿರುವ ಪ್ರವೀಣ್ ಚಾರ್ಮಾಡಿ ಎಂಬವರ ಜೊತೆ ಪ್ರೀತಿ ಬೆಳೆದು. ಮದುವೆ ಆಗುವುದಾಗಿ ಆಕೆ ಜೊತೆ ಲೈಂಗಿಕ ಸಂಪರ್ಕನಡೆಸಿ, ಬಳಿಕ ಮದುವೆ ಆಗುವುದಿಲ್ಲ ಎಂದು ಮೋಸ ಮಾಡಿದ್ದಾನೆ.
ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕುಟುಂಬಸ್ಥರು ದೂರಿದ್ದಾರೆ. ಹಾಗೂ ಪುತ್ರಿಯ ಸಾವಿಗೆ ಸಂಬಂಧಿ ಪ್ರವೀಣ್ ಚಾರ್ಮಾಡಿ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಪ್ರಕರಣದ ಸಂಬಂಧ ಬೆಳ್ತಂಗಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೂ ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
