Home ಸುದ್ದಿಗಳು ಸಂಶಯ ಇದ್ದವರಿಗೆ ಮತ್ತೆ ಸ್ಪಷ್ಟನೆ ಕೊಡಲು ನಾವು ತಯಾರಿದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಂಶಯ ಇದ್ದವರಿಗೆ ಮತ್ತೆ ಸ್ಪಷ್ಟನೆ ಕೊಡಲು ನಾವು ತಯಾರಿದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

0
ಸಂಶಯ ಇದ್ದವರಿಗೆ ಮತ್ತೆ ಸ್ಪಷ್ಟನೆ ಕೊಡಲು ನಾವು ತಯಾರಿದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ವಿಕ್ರಂಗೌಡ ಎನ್‌ಕೌಂಟರ್ ನಡೆದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಎನ್ ಕೌಂಟರ್ ಬಗ್ಗೆ ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ ಎಂದು  ಹೇಳಿದ್ದಾರೆ.

ಸಂಶಯ ಇದ್ದವರಿಗೆ ಮತ್ತೆ ಸ್ಪಷ್ಟನೆ ಕೊಡಲು ನಾವು ತಯಾರಿದ್ದೇವೆ. ನ್ಯಾಯಾಂಗ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ. ನ್ಯಾಯಾಂಗ ತನಿಖೆಗೆ ಕೊಡುವುದು ಸರ್ಕಾರದ ತೀರ್ಮಾನ. ಈ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರ ಬಳಿ ಮಾತನಾಡುತ್ತೇನೆ ಎಂದರು.

ವಿಕ್ರಂಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇತ್ತು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದಾರೆ. ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಪ್ರಾಣಹಾನಿ ಆಗುತ್ತಿತ್ತು. ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.

 

LEAVE A REPLY

Please enter your comment!
Please enter your name here