Home ಸುದ್ದಿಗಳು ಬಾಣಂತಿಯರ ಸಾವು ಪ್ರಕರಣ: ಸರ್ಕಾರಕ್ಕೆ ಬಹಳ ಜವಾಬ್ದಾರಿಯಿದೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬಾಣಂತಿಯರ ಸಾವು ಪ್ರಕರಣ: ಸರ್ಕಾರಕ್ಕೆ ಬಹಳ ಜವಾಬ್ದಾರಿಯಿದೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

0
ಬಾಣಂತಿಯರ ಸಾವು ಪ್ರಕರಣ: ಸರ್ಕಾರಕ್ಕೆ ಬಹಳ ಜವಾಬ್ದಾರಿಯಿದೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣದ ಕುರಿತಂತೆ ಸರ್ಕಾರಕ್ಕೆ ಮತ್ತು ಮಂತ್ರಿಗಳಿಗೆ ಬಹಳ ಜವಾಬ್ದಾರಿಯಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ನೇತೃತ್ವದಲ್ಲಿ ಅವರ ಅಧ್ಯಕ್ಷತೆಯಲ್ಲೇ ಸಭೆ ಕರೆಯಲಾಗಿದೆ. ತಪ್ಪಿತಸ್ಥರ ವಿರುದ್ಧ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ.

ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟಿದ್ದರು.

ಹಾಸನದಲ್ಲಿ ಕಾಂಗ್ರೆಸ್ ಭಿನ್ನಮತೀಯರ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಬ್ಬಾಳ್ಕರ್‌, ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ. ಭಿನ್ನಮತ ಇರುವುದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನವೂ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಎಂದರು.

 

LEAVE A REPLY

Please enter your comment!
Please enter your name here