
ತುಮಕೂರು: ಖಾಸಗಿ ಬಸ್‌ವೊಂದು ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಈ ಘಟನೆಯಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸೋಮವಾರ ಬೆಳಗಿನ ಜಾವ 4:15ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ.
ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಬಸ್‌ನಲ್ಲಿ ಒಟ್ಟು 29 ಜನ ಪ್ರಯಾಣಿಸುತ್ತಿದ್ದು, ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಶಿರಾ, ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
