
ಬಂಟ್ವಾಳ: ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ.
ಈತ 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಕುರಿತು ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು.
ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆದರೆ ಈಗ ಬಂಟ್ವಾಳ ಪೊಲೀಸರು ಆತನನ್ನು ಬಂಧಿಸಿದ್ದಾರೆ.
