
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ತಟ್ಟಿದ್ದು, ಮೊನ್ನೆಯಿಂದ ಸುರಿಯುತ್ತಿರುವ ಜಡಿ ಮಳೆ ಮೈಕೋರೆವ ಚಳಿಗೆ ಜನ ಹೈರಾಣಾಗಿದ್ದಾರೆ.
ಫೆಂಗಲ್ ಪರಿಣಾಮದಿಂದ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆ ಆಗುತ್ತಿದೆ. ಕೊಡಗಿನ ಜೊತೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಉಡುಪಿ, ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲಾದ್ಯಂತ ಸೋಮವಾರ ಕೆಲವೆಡೆ ಭಾರೀ ಮಳೆಯಾಗಿದ್ದು, ಮಂಗಳವಾರವೂ ಮಳೆ ಮುಂದುವರಿಯುವುದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಗೆ ರೆಡ್ ಅಲರ್ಟ್, ಮಂಡ್ಯ, ಹಾಸನಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಂಡಮಾರುತದ ಕಾರಣ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜು (ಪದವಿ, ಸ್ನಾತಕೋತ್ತರ ಹೊರತು)ಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
