
ಮಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಯುಐ (UI) ಸಿನಿಮಾ ರಿಲೀಸ್‌ಗೆ ಸಜ್ಜಾಗಿರುವ ಹಿನ್ನಲೆಯಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ.
ನಂತರ ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ ಹಾಗೂ ‘ಯುಐ’ ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.
ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.
