Home ಸುದ್ದಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ: ಅಧಿಕಾರಿಗಳಿಂದ ದಾಳಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ: ಅಧಿಕಾರಿಗಳಿಂದ ದಾಳಿ

0
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ: ಅಧಿಕಾರಿಗಳಿಂದ ದಾಳಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬಂದಿ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ದೇವಸ್ಥಾನದ ಸಿಬಂದಿ, ಸುಬ್ರಹ್ಮಣ್ಯ ಪೊಲೀಸರು ಅಂಗಡಿಗಳ ಮೇಲೆ ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ತಂಬಾಕು ಉತ್ಪನ್ನಗಳಾದ ಸಿಗರೇಟ್‌, ಪಾನ್‌ ಪರಾಗ್‌, ಮಧು, ಮಾರುತಿ, ಕೂಲ್‌ ಲಿಪ್‌ ಬೇರೆ ಬೇರೆ ರೀತಿಯ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ತಂಬಾಕು ಉತ್ಪನ್ನಗಳ ದಾಸ್ತಾನು, ಮಾರಾಟ ಪತ್ತೆಯಾಗಿದೆ. ತಂಬಾಕು ಪದಾರ್ಥಗಳನ್ನು ವಶಪಡಿಸಿಕೊಂಡು ಅಂಗಡಿಯವರಿಗೆ ದಂಡ ವಿಧಿಸಿದರು.

ದೇವಳದ ಪರಿಸರದಲ್ಲಿ ಎಲ್ಲಿಯೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು. ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ವರ್ತಕರಿಗೆ ಈ ಸಂದರ್ಭ ಅಧಿಕಾರಿಗಳು ಸೂಚನೆ ನೀಡಿದರು.

 

LEAVE A REPLY

Please enter your comment!
Please enter your name here