Home ಸುದ್ದಿಗಳು ದತ್ತಜಯಂತಿ: ಡಿ.11 ರಿಂದ 14ರ ವರೆಗೆ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ದತ್ತಜಯಂತಿ: ಡಿ.11 ರಿಂದ 14ರ ವರೆಗೆ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

0
ದತ್ತಜಯಂತಿ: ಡಿ.11 ರಿಂದ 14ರ ವರೆಗೆ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ದತ್ತಪೀಠದಲ್ಲಿ ದತ್ತಜಯಂತಿ ಪ್ರಯುಕ್ತ ಪ್ರವಾಸಿಗರಿಗೆ ಡಿ.11 ರಿಂದ 14ರ ವರೆಗೆ ನಿರ್ಬಂಧ ಹೇರಲಾಗಿದೆ.

ಈ ನಾಲ್ಕು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರ ಸೇರಿದಂತೆ ಪಶ್ಚಿಮ ಘಟ್ಟಗಳ ಸಾಲಿನ ಎಲ್ಲಾ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಂಪೂರ್ಣ ನಿರ್ಬಂಧ ಹೇರಿದೆ.

ಡಿ.11 ರ ಬೆಳಗ್ಗೆ 6 ಗಂಟೆಯಿಂದ ಡಿ.15ರ ಬೆಳಗ್ಗೆ 10 ಗಂಟೆವರೆಗೂ ಜಿಲ್ಲಾಡಳಿತ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಿದೆ.

12-13-14 ಈ ಮೂರು ದಿನಗಳು ಸೂಕ್ಷ್ಮ ದಿನಗಳು. ಈ ಮೂರು ದಿನವೂ ದತ್ತಪೀಠದಲ್ಲಿ ನಾನಾ ಕಾರ್ಯಕ್ರಮಗಳು ನಡೆಯಲಿವೆ. ಹಾಗಾಗಿ, ಮುಂಜಾಗೃತ ಕ್ರಮವಾಗಿ ಪ್ರವಾಸಿಗರ ವಾಹನ ಹಾಗೂ ದತ್ತ ಮಾಲಾಧಾರಿಗಳ ವಾಹನಗಳಿಂದ ಟ್ರಾಫಿಕ್ ಜಾಮ್ ಆಗಿ ಸಮಸ್ಯೆ ಆಗಬಾರದು. ಅಲ್ಲದೇ ಭದ್ರತೆಯ ದೃಷ್ಠಿಯಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

13ರಂದು ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಹಾಗೂ ಸಾರ್ವಜನಿಕರು ಸೇರಿ 20,000ಕ್ಕೂ ಅಧಿಕ ಭಕ್ತರು ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ. 14ರಂದು ರಾಜ್ಯದ ವಿವಿಧ ಭಾಗಗಳಿಂದ ಬರುವಂತಹ 25,000ಕ್ಕೂ ಅಧಿಕ ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ.

 

LEAVE A REPLY

Please enter your comment!
Please enter your name here