Home ಸುದ್ದಿಗಳು ಇಎಸ್‌ಐ ಸೌಲಭ್ಯ ವೇತನ ಏರಿಕೆ ಮಾಡುವಂತೆ ಶಾಸಕ ಯಶ್‌ಪಾಲ್‌ ಸುವರ್ಣ ಮನವಿ

ಇಎಸ್‌ಐ ಸೌಲಭ್ಯ ವೇತನ ಏರಿಕೆ ಮಾಡುವಂತೆ ಶಾಸಕ ಯಶ್‌ಪಾಲ್‌ ಸುವರ್ಣ ಮನವಿ

0
ಇಎಸ್‌ಐ ಸೌಲಭ್ಯ ವೇತನ ಏರಿಕೆ ಮಾಡುವಂತೆ  ಶಾಸಕ ಯಶ್‌ಪಾಲ್‌ ಸುವರ್ಣ ಮನವಿ

ಉಡುಪಿ: ಇಎಸ್‌ಐ ಸೌಲಭ್ಯ ವೇತನ ಮಿತಿ ಏರಿಕೆ ಮಾಡುವಂತೆ ಶಾಸಕ ಯಶ್‌ಪಾಲ್‌ ಸುವರ್ಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ದಿಲ್ಲಿಯಲ್ಲಿ ಭೇಟಿಯಾಗಿ ಮನವಿ ಮಾಡಿದ್ದಾರೆ.

ಕಳೆದ 8 ವರ್ಷಗಳಿಂದ ಇಎಸ್‌ಐ ಸೌಲಭ್ಯಕ್ಕೆ ಅರ್ಹ ವೇತನ ಮಿತಿ ಏರಿಕೆಯಾಗದ ಕಾರಣ 21 ಸಾವಿರ ರೂ. ಮೇಲ್ಪಟ್ಟ ವೇತನ ಶ್ರೇಣಿಯ ಕಾರ್ಮಿಕರು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.

ಈ ಹಿಂದೆ ಇದ್ದ 15 ಸಾವಿರ ರೂ. ವೇತನ ಮಿತಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 2016ರಲ್ಲಿ ರೂ. 21 ಸಾವಿರಕ್ಕೆ ಏರಿಸಿತ್ತು.

ವರ್ಷದಿಂದ ವರ್ಷಕ್ಕೆ ಖಾಸಗಿ ಕ್ಷೇತ್ರದಲ್ಲಿ ನೀಡಲಾಗುವ ವಾರ್ಷಿಕ ಭಡ್ತಿ, ಬೆಲೆ ಏರಿಕೆ ಅನುಗುಣವಾಗಿ ವೇತನ ಏರಿಕೆಯಾಗುತ್ತಿರುವುದರಿಂದ ಮಿತಿ ಹೆಚ್ಚಿಸಿದರೆ ಕಾರ್ಮಿಕ ವರ್ಗಕ್ಕೆ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ದೇಶದ ಕೋಟ್ಯಂತರ ಕಾರ್ಮಿಕರು,ಉದ್ಯೋಗಿಗಳು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಿತ್ತು.

ಮನವಿಗೆ ಸ್ಪಂದಿಸಿದ ಸಚಿವೆ ಪೂರಕ ಕ್ರಮದ ಭರವಸೆ ನೀಡಿದ್ದಾರೆ.

 

LEAVE A REPLY

Please enter your comment!
Please enter your name here