
ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರು ಇಂದು ಮುಂಜಾನೆ 3:30ಕ್ಕೆ ವಿಧಿವಶರಾಗಿದ್ದಾರೆ.
ನಸುಕಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು.
ಕೂಡಲೇ ವೈದ್ಯರ ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್‌ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು.
ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವ ಕೃಷ್ಣ ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.
2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಇವರು ವಿಧಾನಸಭೆ ಸ್ಪೀಕರ್, ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ನಾಳೆ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಾಗುತ್ತದೆ. ಸದಾಶಿವನಗರ ಎಸ್ ಎಂ ಕೃಷ್ಣ ಮನೆ ಬಳಿ ಪೊಲೀಸರ ಅಲರ್ಟ್ ಆಗಿದ್ದು ನಿವಾಸದ ಅಕ್ಕಪಕ್ಕ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ.
