Home ಸುದ್ದಿಗಳು ಹಿರಿಯಡಕ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ: ವಿವಿಧ ವಿಭಾಗಗಳಲ್ಲಿ ವ್ಯಾಪಕ ತಪಾಸಣೆ

ಹಿರಿಯಡಕ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ: ವಿವಿಧ ವಿಭಾಗಗಳಲ್ಲಿ ವ್ಯಾಪಕ ತಪಾಸಣೆ

0
ಹಿರಿಯಡಕ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ: ವಿವಿಧ ವಿಭಾಗಗಳಲ್ಲಿ ವ್ಯಾಪಕ ತಪಾಸಣೆ

ಉಡುಪಿ: ಹಿರಿಯಡಕ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್‌ ದಾಳಿ ನಡೆಸಿ ವಿವಿಧ ವಿಭಾಗಗಳಲ್ಲಿ ವ್ಯಾಪಕ ತಪಾಸಣೆ ನಡೆಸಿದರು.

ಎಡಿಶನಲ್‌ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಜೈಲಿನ ಎಲ್ಲ ವಿಭಾಗಗಳ ಪ್ರತಿಯೊಂದು ಕೊಠಡಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಗಾಂಜಾ, ಸಿಗರೇಟು, ತಂಬಾಕು, ಮೊಬೈಲ್‌ ಬಳಕೆ ಬಗ್ಗೆ ಪರಿಶೀಲಿಸಲಾಯಿತು. ಪರಿಶೀಲನೆ ವೇಳೆ ಪೊಲೀಸರಿಗೆ ಅಕ್ರಮ ಚಟುವಟಕೆಗೆ ಸಂಬಂಧಿಸಿ ನಿಷೇಧಿತ ಯಾವುದೇ ವಸ್ತುಗಳು ಲಭಿಸಿಲ್ಲ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ರಾಜ್ಯದ ಕೆಲವು ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳ ಬಳಸುತ್ತಿರುವ ಬಗ್ಗೆ ಆರೋಪಗಳು ಬಂದು ಅಲ್ಲಲ್ಲಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

 

LEAVE A REPLY

Please enter your comment!
Please enter your name here